ಹಡಗಿನಾಳದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

Must Read

ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಗೋಕಾಕ: ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂಥ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ ನಾವು ಕುಸ್ತಿ ಆಟವನ್ನು ನೋಡುವಂತಾಗಿದೆ ಎಂದು ಹೇಳಿದರು.

ಗ್ರಾಮೀಣ ಕ್ರೀಡೆಗಳನ್ನು ಬೆಳೆಸಬೇಕಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡಲಾಗುವುದು. ಭಾರತೀಯ ಇತಿಹಾಸ ಮತ್ತು ಸಂಸ್ಕೃತಿ ವೈಭವೀಕರಿಸಲು ಕುಸ್ತಿ, ಕಬಡ್ಡಿಯಂತಹ ದೇಶೀಯ ಆಟಗಳನ್ನು ಪ್ರೋತ್ಸಾಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಿಸಲು 15 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹಡಗಿನಾಳದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಕೊರೋನಾ ನಿರ್ಲಕ್ಷಿಸಬೇಡಿ: ಲಾಕ್‍ಡೌನ್ ನಂತರ ಅನ್‍ಲಾಕ್ ಸಮಯದಲ್ಲಿ ಸಾರ್ವಜನಿಕರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.

ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿಯೊಬ್ಬರೂ ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಸಬೇಕು. ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಈಗಾಗಲೇ ಕೊರೋನಾ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸಲಾಗುತ್ತಿದ್ದು, ಕೋವಿಡ್ ಲಸಿಕೆಗಳನ್ನು ಎಲ್ಲರೂ ಹಾಕಿಸಿಕೊಳ್ಳಬೇಕು. ಇದರಿಂದ ನಿಮ್ಮಲ್ಲಿರುವ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದು ಹೇಳಿದರು.

ಗುದ್ದಲಿ ಪೂಜೆ: ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 15 ಲಕ್ಷ ರೂ. ವೆಚ್ಚದ ಗರಡಿ ಮನೆ ನಿರ್ಮಾಣ, ಮುತ್ತೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣ ಮತ್ತು ಮೋಟ ಬಸಪ್ಪ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ, ಉದಗಟ್ಟಿ ಗ್ರಾಪಂ ಅಧ್ಯಕ್ಷ ಪಾಂಡುರಂಗ ದೊಡಮನಿ, ತಾಪಂ ಮಾಜಿ ಸದಸ್ಯ ನಾಗಪ್ಪ ಮಂಗಿ, ಮುಖಂಡರಾದ ಮುತ್ತೇನಗೌಡ ಪಾಟೀಲ, ಮುದಕಪ್ಪ ತಳವಾರ, ಬಾಳಪ್ಪ ಕಲ್ಲೋಳಿ, ಮುತ್ತೆಪ್ಪ ಆಡಿನ, ಬಸಪ್ಪ ಶೀಗಿಹಳ್ಳಿ, ಯಲ್ಲಪ್ಪಸ್ವಾಮಿ ವಡೇರ, ರಾಮಚಂದ್ರ ಪತ್ತಾರ, ಕಾಮಪ್ಪ ಚಿಗಡೊಳ್ಳಿ ಮುಂತಾದವರು ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group