spot_img
spot_img

ನ. ೨೯ ರಂದು ಯಾದವಾಡ ಸಾಂಸ್ಕೃತಿಕ ಉತ್ಸವ – ಕಲ್ಮೇಶ ಗಾಣಗಿ

Must Read

spot_img
- Advertisement -

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು “ಯಾದವಾಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಮ್ಮ ಕರವೇ ಸಂಸ್ಥಾಪಕ ಕಲ್ಮೇಶ ಗಾಣಿಗಿ ಹೇಳಿದರು.

ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿ ವರ್ಷವೂ ಕೂಡಾ ಯಾದವಾಡ ಗ್ರಾಮದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಉದ್ಘಾಟಕರಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಮಿಸುತ್ತಿದ್ದಾರೆ ಹಾಗೂ ಅನೇಕ ಕಲಾವಿದರು, ಕಲಾ ತಂಡಗಳು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.

ನ. 29ರಂದು ಸಂಜೆ 6 ಗಂಟೆಗೆ ರಾಷ್ಟ್ರಮಟ್ಟದ ಸಮೂಹ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಥಮ ಬಹುಮಾನ 35 ಸಾವಿರ ದ್ವಿತೀಯ 30 ಸಾವಿರ, ತೃತೀಯ 25 ಸಾವಿರ, ಚತುರ್ಥ 20 ಸಾವಿರ, ಪಂಚಮ 15 ಸಾವಿರ, ಷಷ್ಠಿ 10 ಸಾವಿರ, ಸಪ್ತಮಿ 7 ಸಾವಿರ, ಅಷ್ಟಮಿ 5 ಸಾವಿರ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ, 9901774988, 9008316143, 9739483248, 9538573484ಗೆ ಸಂಪರ್ಕಿಸಿ ಬಹುದೆಂದು ತಿಳಿಸಿದರು.

- Advertisement -

ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರಾದ ವೆಂಕಟೇಶ ಇಟ್ಟನ್ನವರ, ವೆಂಕಟೇಶ ದಾಸರ ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group