ಮೂಡಲಗಿ: ಕೇಂದ್ರ ಆಯುಷ್ಯ ಇಲಾಖೆ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ ಸಂಸ್ಥೆ ಕಲ್ಲೋಳಿ, ಮೂಡಲಗಿ ಶಿಕ್ಷಣ ಸಂಸ್ಥೆ ಮೂಡಲಗಿ ಹಾಗೂ ತಾಲೂಕಾಡಳಿತ ಮೂಡಲಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ -2025 ರ ನಿಮಿತ್ತ ಯೋಗೋತ್ಸವ ಕಾರ್ಯಕ್ರಮವು ಶನಿವಾರ 24 ರಂದು ಮುಂಜಾನೆ 07.00 ಗಂಟೆಗೆ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಚಾಲನೆ ನೀಡಲಿದ್ದು, ಅಧ್ಯಕ್ಷತೆಯನ್ನು ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೆಂಕಟೇಶ ಸೋನವಾಲಕರ, ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ರವಿ ಸೋನವಾಲಕ, ತಹಶೀಲ್ದಾರ ಶಿವಾನಂದ ಬಬಲಿ, ತಾಲೂಕ ಪಂಚಾಯತ ಕಾರ್ಯನಿವಾಹಕ ಅಧಿಕಾರಿ ಎಫ್. ಜಿ. ಚಿನ್ನನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಸಿಡಿಪಿಒ ಯಲ್ಲಪ್ಪ ಗದಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ತಾಲೂಕಾ ಆರೋಗ್ಯಾಧಿಕಾರಿ ಎಂ.ಎಚ್. ಕೊಪ್ಪದ, ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಆಗಮಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಯೋಗ ಪಟು, ಚಿನ್ನದ ಪದಕ ಪಡೆದ ಕುಮಾರಿ ನಿರ್ಮಲಾ ಕೊಡ್ಲಿವಾಡ ಯೋಗ ಪ್ರದರ್ಶನ ನೀಡಲಿದ್ದಾರೆ. ಮೂಡಲಗಿ ಪಟ್ಟಣದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೇವಾ ಸಂಸ್ಥೆ ಅಧ್ಯಕ್ಷ ಪರಪ್ಪ ಗಿರೆಣ್ಣವರ ಪ್ರಕಟಣೆಯಲ್ಲಿ ಕೋರಿದ್ದಾರೆ.