spot_img
spot_img

ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯೋಗ ದಿನಾಚರಣೆ

Must Read

ಮೂಡಲಗಿ: ಇಂದಿನ ಅವಸರದ ಜೀವನದಲ್ಲಿ ಕೆಲಸದ ಜೊತೆಗೆ ನಮ್ಮ ಆರೋಗ್ಯವನ್ನು ಯೋಗ ಮತ್ತು ಧ್ಯಾನದಿಂದ ಕಾಪಾಡಿಕೊಳ್ಳಲು ಸಾಧ್ಯ ಎಂದು ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆ ಮುಖ್ಯಸ್ಥ ಪ್ರಭಾತ್‍ಕುಮಾರ್ ಸಿಂಗ್ ಹೇಳಿದರು.

ಅವರು ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಅರಳಿಕಟ್ಟಿ ಫೌಂಡೇಶನ್ ಆವರಣದಲ್ಲಿ ಆಯೋಜಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು.

ಅರಳಿಕಟ್ಟಿ ಫೌಂಡೇಶನ್ ಚೇರ್ಮನ್ ಡಾ. ಟಿ.ವ್ಹಿ.ಅರಳಿಕಟ್ಟಿ ಅವರು ಯೋಗ ದಿನಾಚರಣೆ ಆಚರಣೆ ಆಗಿರದೆ ವರ್ಷದ 365 ದಿನವೂ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಯೋಗವನ್ನು ರೂಢಿಯಲ್ಲಿರಿಸಬೇಕು ಎಂದರು.

ಯೋಗ ದಿನಾಚರಣೆಯಲ್ಲಿ ಕಾರ್ಖಾನೆಯ ಉದ್ಯೋಗಿಗಳು ತಮ್ಮ ಕುಟುಂಬ ವರ್ಗದವರೊಂದಿಗೆ ಪಾಲ್ಗೊಂಡು ಯೋಗಾಸನ ಪ್ರದರ್ಶಿಸಿದರು. ಬೆಳಗಲಿಯ ಋಷಿ ಯೋಗಾಶ್ರಮ ಸದಾಶಿವ ಗುರೂಜಿ ಅವರು ಯೋಗ ತರಬೇತಿಯನ್ನು ನೀಡಿದರು.

ಕಾರ್ಖಾನೆ ಮಾನವ ಸಂಪನ್ಮೂಲ ವಿಭಾಗದ ಹಿರಿಯ ವ್ಯವಸ್ಥಾಪಕ ಉಮೇಶ್ ದೇಸಾಯಿ ನಿರೂಪಿಸಿದರು, ಮಾನವ ಸಂಪನ್ಮೂಲ ವಿಭಾಗದ ಉಪ ವ್ಯವಸ್ಥಾಪಕ ವೈಭವ ಕುಲಕರ್ಣಿ ವಂದಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮಣ್ಣು ಉಳಿಸಿ ಹೋರಾಟಕ್ಕೆ ಬೆಂಬಲ ನೀಡೋಣ – ಅಶೋಕ ಅಲ್ಲಾಪೂರ

ಸಿಂದಗಿ - ಜಗತ್ತಿನ ಜೀವ ಸಂಕುಲಕ್ಕೆ ಆಶ್ರಯವಾದ ಭೂಮಿಯನ್ನು ಮತ್ತು ಮಣ್ಣನ್ನು ಉಳಿಸಿ ಮುಂದಿನ ಜನಾಂಗಕ್ಕೆ ಫಲವತ್ತಾದ ಭೂಮಿ ನೀಡಲು ಶ್ರೀ ಸದ್ಗುರು ಜಗ್ಗಿ ವಾಸುದೇವ್...
- Advertisement -

More Articles Like This

- Advertisement -
close
error: Content is protected !!