ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
179

ಮೈಸೂರಿನ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿಂದು ಹತ್ತನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿ ಶ್ರೀಮತಿ ಕಾಂತಿ ನಾಯಕ್, ಶಾಲಾ ಮುಖ್ಯೋಪಾಧ್ಯಾಯ ಮೊಹಮ್ಮದ್ ಫಾರೂಕ್, ಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉತ್ಸಾಹದಿಂದ ಭಾಗವಹಿಸಿದ್ದರು.

ಮಕ್ಕಳಿಗೆ ಯೋಗದ ಮಹತ್ವವನ್ನು ತಿಳಿಸಿಕೊಡಲಾಯಿತು. ಶಾಲೆಯ ಎಲ್ಲ ಮಕ್ಕಳು ಅತ್ಯುತ್ಸಾಹದಿಂದ ಯೋಗಾಸನ ಮಾಡಿ, ಯೋಗ ದಿನ ಆಚರಣೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು