ಗಣೇಶವಾಡಿಯಲ್ಲಿ ಕರವೇ ಘಟಕ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಕನ್ನಡ ನಾಡಿನಲ್ಲಿ ಜನಿಸಿರುವುದೇ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ: ರಾಹುಲ್

ಮೂಡಲಗಿ: ಅರಭಾಂವಿ ಮತ ಕ್ಷೇತ್ರದ ಗಣೇಶವಾಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಮ್ಮ ನಾಡಿನ ಮಹಾನ್ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಕಲಾವಿದರು, ಕ್ರೀಡಾಪಟುಗಳು ಸೇರಿ ಅನೇಕರು ದೇಶಕ್ಕೆ ಅಮೂಲ್ಯವಾದ ಸೇವೆ ಸಲ್ಲಿಸಿ ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ನಾಡಿನಲ್ಲಿ ಜನಿಸಿರುವುದೇ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

- Advertisement -

ವಿವಿಧ ಕ್ಷೇತ್ರಗಳಲ್ಲಿ ಪ್ರಪಂಚದ ಮೂಲೆ ಮೂಲೆಯಲ್ಲೂ ಕನ್ನಡಿಗರಿದ್ದು, ತಮ್ಮದೇಯಾದ ಕೊಡುಗೆ ನೀಡುತ್ತಿದ್ದಾರೆ. ಪ್ರತಿಯೊಬ್ಬರು ಕನ್ನಡದ ಮಹತ್ವವನ್ನು ಅರಿಯಬೇಕು. ಭಾಷೆಯ ಉಳಿವು ಹಾಗೂ ಬೆಳವಣಿಗೆಗೆ ಶ್ರಮಿಸಬೇಕು ಎಂದರು.

ಬೆಳಗಾವಿ ಗಡಿ ಜಿಲ್ಲೆಯಾಗಿರುವುದರಿಂದ ಕರ್ನಾಟಕ ರಕ್ಷಣಾ ವೇದಿಕೆಯಂತಹ ಸಂಘಟನೆಗಳ ಪಾತ್ರ ಇಲ್ಲಿ ಮಹತ್ವದ್ದಾಗಿದೆ. ಭಾಷೆಯ ಬೆಳವಣಿಗೆಗೆ ಸಂಘಟನೆಗಳೊಂದಿಗೆ ಜನರು ಕೂಡ ಕೈಜೋಡಿಸಬೇಕು ಎಂದು ಹೇಳಿದರು.

ಯುವ ಮುಖಂಡರಾದ ಸರ್ವೋತ್ತಮ ಜಾರಕಿಹೊಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಬಸವರಾಜ ಖಾನಪ್ಪನವರ, ಮದನ ದೇಶಪಾಂಡೆ, ಶಿವಲಿಂಗ ಪೂಜೇರಿ, ತ್ರಿಪತಿ ಗಣೇಶವಾಡಿ, ಭರನಗೌಡ ಪಾಟೀಲ, ಲಕ್ಷ್ಮಣ ಗನ್ನಪ್ಪಗೋಳ, ರಮೇಶ ಪೂಜೇರಿ, ಭೀಮಶಿ ಕೆಂಪನಗೋಳ, ಸಿದ್ದರಾಮ ಮೂಲಿಮನಿ , ಪಾಂಡು ಮನ್ನಿಕೆರಿ, ಮುರಳಿಧರ ಬಡಿಗೇರ, ಕರವೇ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!