spot_img
spot_img

ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ರಾಜ್ಯ ಪ್ರಶಸ್ತಿ: ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಸನ್ಮಾನ

Must Read

- Advertisement -

ಕೊಪ್ಪಳ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕರು ಅಧಿಕಾರಿಗಳು ಹಾಗೂ ಕಲರವ ಶಿಕ್ಷಕರ ಸೇವಾ ಬಳಗದ ಸದಸ್ಯರಾದ ಪೌಜೀಯಾ ತರುನ್ನಮ್ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ ಲಭಿಸಿರುವುದಕ್ಕೆ ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಅವರ ಕಚೇರಿಯಲ್ಲಿ ಅಭಿನಂದಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಅವರು ಮತದಾರರ ಜಾಗೃತಿಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದ್ದರ ಪ್ರಯುಕ್ತ ರಾಜ್ಯ ಮಟ್ಟದ ಸ್ವೀಪ್ ಸಮಿತಿಯು ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೇ,ರಾಜ್ಯ ಮಟ್ಟದ ಉತ್ತಮ ಕಾರ್ಯ ನಿರ್ವಹಣೆಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಅವರು ಜಿಲ್ಲೆಯ ಮತದಾರರ ನೋಂದಣಿ ಹಾಗೂ ಮತದಾನವಾಗುವುದಕ್ಕೆ ಕಾರಣವಾಗಿದ್ದರು.ಅನೇಕ ರೀತಿಯ ಹೊಸ ಹೊಸ ವಿಧಾನಗಳನ್ನು ಅಳವಡಿಸಿ ಜಾಗೃತಿ ಮೂಡಿಸಿದ ಪ್ರಯುಕ್ತ ಪ್ರಶಸ್ತಿ ಲಭಿಸಿದೆ.

- Advertisement -

ಈ ಸಮಯದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪೌಜೀಯಾ ತರುನ್ನಮ್ ಮಾತನಾಡಿ, ಎಲ್ಲರ ಸಹಕಾರದಿಂದ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ನನ್ನ ಜೊತೆಯಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬ ನೌಕರರಿಗೆ ಪ್ರಶಸ್ತಿ ಲಭಿಸಿದಂತೆ ಮುಂದೆಯೂ ಕೂಡಾ ಇದೇ ರೀತಿಯಲ್ಲಿ ಪ್ರತಿಯೊಬ್ಬರು ಉತ್ತಮ ರೀತಿಯಲ್ಲಿ ಕೆಲಸ ಮಾಡೋಣ ಎಂದು ಹೇಳಿದರು.

ಕಲರವ ಶಿಕ್ಷಕರ ಸೇವಾ ಬಳಗದ ಸದಸ್ಯರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ, ಕಲರವ ಶಿಕ್ಷಕರ ಸೇವಾ ಬಳಗದ ಸದಸ್ಯರಾದ ನಿಮಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿರುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ.ಇದೇ ರೀತಿಯಲ್ಲಿ ಇನ್ನೂ ಅನೇಕ ಪ್ರಶಸ್ತಿಗಳು ಲಭಿಸಲಿ ಎಂದು ಹೇಳಿದರು.

ಈ ಸಮಯದಲ್ಲಿ ಐ.ಎ.ಎಸ್.ಪ್ರೊಬೇಷನರಿ ಅಧಿಕಾರಿಗಳಾದ ಹೇಮಂತಕುಮಾರ,ಜಿಲ್ಲಾ ಪಂಚಾಯತ್ ಸಿಬ್ಬಂದಿ ಶ್ರೀನಿವಾಸ, ಕಲರವ ಶಿಕ್ಷಕರ ಸೇವಾ ಬಳಗದ ಸದಸ್ಯರಾದ ಕಾಶಿನಾಥ ಸಿರಿಗೇರಿ, ಹನುಮಂತಪ್ಪ ಕುರಿ, ಶರಣಪ್ಪ ರಡ್ಡೆರ,ಮಲ್ಲಪ್ಪ ಗುಡ್ಡದನ್ನವರ, ಹುಲುಗಪ್ಪ ಭಜಂತ್ರಿ, ಗುರುಸ್ವಾಮಿ, ಆರ್ಶಿ, ಕ್ಷಕರಾದ ನಾಗರಾಜ ಕಾತರಕಿ ಮುಂತಾದವರು ಹಾಜರಿದ್ದರು.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group