ಸಿಂದಗಿ ಉಪ ಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಘೋಷಣೆ

ಸಿಂದಗಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂದಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ.

ಜೆಡಿಎಸ್ ಪಕ್ಷದ ರಾಷ್ಟ್ರೀಯ ವರಿಷ್ಠ ಎಚ್.ಡಿ.ದೇವೆಗೌಡರ ಗರಡಿಯಲ್ಲಿ ಬೆಳೆದಿರುವ ದಿ. ಆಯ್.ಬಿ.ಅಂಗಡಿಯವರನ್ನು ಎಂ.ಎಸ್‍ಐಎಲ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು ಅಧಿಕಾರ ವಹಿಸಿಕೊಂಡ ಕೆಲದಿನಗಳಲ್ಲಿ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು ಅವರ ಸ್ಥಾನ ತುಂಬಲು ಆ ಕುಟುಂಬದ ಯಾರೊಬ್ಬರು ಬಂದಿಲ್ಲ ಎನ್ನುವ ಕೊರಗು ಜೆಡಿಎಸ್ ಪಕ್ಷಕ್ಕಿತ್ತು ಅದನ್ನು ನಿಭಾಯಿಸುವ ನಿಟ್ಟಿನಲ್ಲಿ ಅವರ ಎರಡನೇ ಸೊಸೆಯಾದ ಶ್ರೀಮತಿ ನಾಜಿಯಾ ಶಕೀಲ ಅಂಗಡಿ ಅವರು ಎಂ.ಎ.ಬಿಇಡಿ  ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ.

- Advertisement -

ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ  ಸಲ್ಲುವ ಮಹಿಳೆಯಾಗಿದ್ದಾರೆ. ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲ ಅಂಗಡಿ ಅವರನ್ನು ಸಮಸ್ತ ಸಿಂದಗಿ ಕ್ಷೇತ್ರದ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ನಿಯಾಜ್ ಶೇಕ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಆಯ್ಕೆ ಮಾಡುವ ಮೂಲಕ ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಅವರು ಕೋರಿದ್ದಾರೆ.

ಮುಖ್ಯಾಂಶಗಳು

  • ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಜೆಡಿಎಸ್ ಟಿಕೆಟ್
  • ನಿಷ್ಠೆ ಮತ್ತು ವಿದ್ಯಾರ್ಹತೆ ಗಮನಿಸಿ ಇಬ್ಬರಿಗೂ ಟಿಕೆಟ್
    ಅಲ್ಪಸಂಖ್ಯಾತ ಸಮುದಾಯದ ಯುವಜನರನ್ನು ಗುರುತಿಸಿದ ಕುಮಾರಸ್ವಾಮಿ.
  • ಬಿಜೆಪಿ, ಕಾಂಗ್ರೆಸ್ ಪಕ್ಷಗಗಳಿಗಿಂತ ಮೊದಲೇ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಹೆಚ್.ಡಿ.ಕೆ
  • ಪಕ್ಷದ ಪಂಚರತ್ನ  ಪರಿಕಲ್ಪನೆಯಂತೆ ಇಬ್ಬರೂ ವಿದ್ಯಾವಂತರ ಆಯ್ಕೆ
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!